Bengaluru 23°C
Ad

ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್‌ ನೇಮಕ

ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್‌ ಅವರು ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ನವದೆಹಲಿ: ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್‌ ಅವರು ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 5,000 ಗಂಟೆಗಳ ಯುದ್ಧ ವಿಮಾನ ಹಾರಾಟದ ಅನುಭವ ಹೊಂದಿರುವ ಅಮರ್ ಪ್ರೀತ್ ಸಿಂಗ್ ಈ ಹಿಂದೆ ವಾಯುಪಡೆಯ ವೈಸ್ ಚೀಫ್ ಆಫ್ ದಿ ಏರ್ ಸ್ಟಾಫ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಇಂದು ಏರ್ ಚೀಫ್ ಮಾರ್ಷಲ್ ವಿ.ಆರ್ ಚೌಧರಿ ನಿವೃತ್ತರಾಗಿದ್ದು, ವಾಯುಪಡೆ ನೂತನ ಮುಖ್ಯಸ್ಥರಾಗಿ ಎಪಿ ಸಿಂಗ್ ಅಧಿಕಾರ ವಹಿಸಿಕೊಂಡಿದ್ದಾರೆ. ಅಮರ್ ಪ್ರೀತ್ ಸಿಂಗ್ 5,000 ಗಂಟೆಗಳ ಯುದ್ಧ ವಿಮಾನ ಹಾರಾಟದ ಅನುಭವ ಹೊಂದಿದ್ದಾರೆ. ಇತ್ತೀಚೆಗೆ ಐಎಎಫ್ ಆಯೋಜಿಸಿದ್ದ ಬಹುರಾಷ್ಟ್ರೀಯ ಯುದ್ಧ ವಿಮಾನಗಳ ಕಸರತ್ತು `ತರಂಗ್ ಶಕ್ತಿ’ ಆಯೋಜಿಸುವಲ್ಲಿ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು.

ಪರೀಕ್ಷಾ ಪೈಲಟ್ ಆಗಿ, ಮಾಸ್ಕೋದಲ್ಲಿ ಮಿಗ್-29 ಅಪ್‍ಗ್ರೇಡ್ ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ತಂಡವನ್ನು ಮುನ್ನಡೆಸಿದ್ದರು. ಅಲ್ಲದೇ ರಾಷ್ಟ್ರೀಯ ವಿಮಾನ ಪರೀಕ್ಷಾ ಕೇಂದ್ರದಲ್ಲಿ ಯೋಜನಾ ನಿರ್ದೇಶಕರಾಗಿದ್ದರು (ವಿಮಾನ ಪರೀಕ್ಷೆ) ಮತ್ತು ಲಘು ಯುದ್ಧ ವಿಮಾನ ತೇಜಸ್‍ನ ಹಾರಾಟ ಪರೀಕ್ಷೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಏರ್ ಮಾರ್ಷಲ್ ಪರಮ ವಿಶಿಷ್ಟ ಸೇವಾ ಪದಕ ಮತ್ತು ಅತಿ ವಿಶಿಷ್ಟ ಸೇವಾ ಪದಕವನ್ನು ಪಡೆದಿದ್ದಾರೆ.

Ad
Ad
Nk Channel Final 21 09 2023