Ad

ಎರಡು ಕಾರುಗಳ ನಡುವೆ ಭೀಕರ ಅಪಘಾತ: 7 ಜನ ಸ್ಥಳದಲ್ಲೇ ಮೃತ್ಯು

ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ.

ಮಹಾರಾಷ್ಟ್ರ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ.

Ad
300x250 2

ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದು, 5 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ 11 ಗಂಟೆ ವೇಳೆಗೆ ಅಪಘಾತ ನಡೆದಿದೆ. ಮಾರುತಿ ಸ್ವಿಫ್ಟ್​ ಮತ್ತು ಎರ್ಟಿಗಾ ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.

ಮಾಹಿತಿ ಪ್ರಕಾರ, ಕಾರು ಇಂಧನ ತುಂಬಿಸಲೆಂದು ವಿರುದ್ಧ ದಿಕ್ಕಿನಲ್ಲಿ ಹೈವೇನಲ್ಲಿ ಬಂದಿದೆ. ಈ ವೇಳೆ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad