Bengaluru 23°C
Ad

ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನಕ್ಕೆ ಬಾಂಬ್ ಬೆದರಿಕೆ

ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದ ಘಟನೆ ನಡೆದಿದೆ.

ದೆಹಲಿ: ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದ ಘಟನೆ ನಡೆದಿದೆ.

ರಾತ್ರಿ 10.50ರ ಸುಮಾರಿಗೆ ಟೇಕ್ ಆಫ್ ಆಗಬೇಕಿದ್ದ ವಿಮಾನವನ್ನು ಐಸೋಲೇಷನ್ ಗೆ ಕಳುಹಿಸಲಾಗಿತ್ತು, ಸುರಕ್ಷತೆ ದೃಷ್ಟಿಯಿಂದ ವಿಮಾನ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ನಡೆಸಲಾಯಿತು. ವಿಮಾನದಲ್ಲಿ 306 ಪ್ರಯಾಣಿಕರಿದ್ದರು.

ಈ ಹಿಂದೆ ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಿಂದ ಮುಂಬೈಗೆ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಸ್ತಾರಾ ವಿಮಾನ ಕ್ಕೆ ಬಾಂಬ್ ಬೆದರಿಕೆ ಬಂದಿತ್ತು.

ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಯುಕೆ 024 ವಿಮಾನವು ಏರ್ ಸಿಕ್‌ನೆಸ್ ಬ್ಯಾಗ್‌ನಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿತ್ತು.

ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು ಈ ಕಾರಣದಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿತ್ತು.

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ 6ಇ 5314 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು.

ಒಂದು ತಿಂಗಳಿನಿಂದ ದೇಶದ ಹಲವಾರು ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆಗಳು ಬರುತಿದ್ದು ಎಲ್ಲ ಕಡೆ ಜನರ ಸುರಕ್ಷತಾ ದೃಷ್ಟಿಯಿಂದ ಭದ್ರತೆ ಹೆಚ್ಚಿಸಿಕೊಳ್ಳಬೇಕಾಗಿದೆ.

Ad
Ad
Nk Channel Final 21 09 2023
Ad