Bengaluru 26°C
Ad

ʼಭಾರತೀಯ ಗಗನಯಾತ್ರಿಯನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಾಗುವುದುʼ

ಭಾರತೀಯ ಗಗನಯಾತ್ರಿಯನ್ನು ಈ ವರ್ಷಾಂತ್ಯದೊಳಗೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಾಗುವುದು ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್‌ ಗಾರ್ಸೆಟ್ಟಿ ಹೇಳಿದ್ದಾರೆ.

ಮುಂಬೈ: ಭಾರತೀಯ ಗಗನಯಾತ್ರಿಯನ್ನು ಈ ವರ್ಷಾಂತ್ಯದೊಳಗೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಾಗುವುದು ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್‌ ಗಾರ್ಸೆಟ್ಟಿ ಹೇಳಿದ್ದಾರೆ.

ಅವರು ಅಮೆರಿಕದ 248ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಗಾರ್ಸೆಟ್ಟಿ, ‘ನಾವು ಈ ವರ್ಷಾಂತ್ಯದಲ್ಲಿ ಭಾರತೀಯ ಗಗನಯಾತ್ರಿಯನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಿದ್ದೇವೆ.

ಪ್ರಧಾನಿ ನರೇಂದ್ರ ಮೋದಿ ಅವರು 2023ರಲ್ಲಿ ಅಮೆರಿಕಕ್ಕೆ ಬಂದಿದ್ದಾಗ, ಈ ಬಗ್ಗೆ ಭರವಸೆ ನೀಡಿದ್ದೇವೆ. ಯೋಜನೆಯು ಪ್ರಗತಿಯಲ್ಲಿದ್ದು, ಇದೇ ವರ್ಷ ಕೈಗೂಡಲಿದೆ ಎಂದಿದ್ದಾರೆ.

ಭಾರತದ ‘ಇಸ್ರೊ’ ಹಾಗೂ ಅಮೆರಿಕದ ‘ನಾಸಾ’ ಬಾಹ್ಯಾಕಾಶ ಸಂಶೋಧನಾ ಕೇಂದ್ರಗಳು ಜಂಟಿಯಾಗಿ ಅಭಿವೃದ್ಧಿಪಡಿಸುತ್ತಿರುವ ಭೂ ವೀಕ್ಷಣಾ ಉಪಗ್ರಹ ‘ನಿಸಾರ್’ ಈ ವರ್ಷಾಂತ್ಯದಲ್ಲಿ ಉಡಾವಣೆಗೊಳ್ಳುವ ಸಾಧ್ಯತೆ ಇದೆ ಎಂದೂ ತಿಳಿಸಿದ್ದಾರೆ.

ಭಾರತ ಮತ್ತು ಅಮೆರಿಕ ಸಂಶೋಧನೆ ಮತ್ತು ನಿರ್ಣಾಯಕ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಮನ್ವಯ ಸಾಧಿಸುವುದರತ್ತ ಗಮನಹರಿಸಬೇಕು. ಪರಸ್ಪರ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಇದರಿಂದ ಸಾಧ್ಯ ಎಂದು ಸಲಹೆ ನೀಡಿದ್ದಾರೆ.

 

Ad
Ad
Nk Channel Final 21 09 2023
Ad