Ad

ಆಂಧ್ರ ಬಸ್ ಪಲ್ಟಿ : 13ಕ್ಕೂ ಅಧಿಕ‌ ಪ್ರಯಾಣಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು- ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಚೆಂಡೂರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಂಧ್ರಪ್ರದೇಶದ ಬಸ್ ಪಲ್ಟಿಯಾದ ಪರಿಣಾಮ 13ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ರವಿವಾರ (ಆ.11) ನಡೆದಿದೆ. ಬೆಂಗಳೂರಿಂದ ಪುಟ್ಟಪರ್ತಿ ಕಡೆಗೆ ಪ್ರಯಾಣಿಸುತ್ತಿದ್ದ ಆಂಧ್ರಪ್ರದೇಶದ ಬಸ್ ಗುಡಿಬಂಡೆ ತಾಲ್ಲೂಕಿನ ಚೆಂಡೂರ್ ಕ್ರಾಸ್ ಬಳಿ ಪಲ್ಟಿಯಾಗಿದೆ.

ಗುಡಿಬಂಡೆ: ಬೆಂಗಳೂರು- ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಚೆಂಡೂರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಂಧ್ರಪ್ರದೇಶದ ಬಸ್ ಪಲ್ಟಿಯಾದ ಪರಿಣಾಮ 13ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ರವಿವಾರ (ಆ.11) ನಡೆದಿದೆ. ಬೆಂಗಳೂರಿಂದ ಪುಟ್ಟಪರ್ತಿ ಕಡೆಗೆ ಪ್ರಯಾಣಿಸುತ್ತಿದ್ದ ಆಂಧ್ರಪ್ರದೇಶದ ಬಸ್ ಗುಡಿಬಂಡೆ ತಾಲ್ಲೂಕಿನ ಚೆಂಡೂರ್ ಕ್ರಾಸ್ ಬಳಿ ಪಲ್ಟಿಯಾಗಿದೆ.

ಬಸ್ ನಲ್ಲಿ ಸುಮಾರು 30 ಜನ ಪ್ರಯಾಣಿಸುತ್ತಿದ್ದು ಇದರಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ 13 ಜನರು ಗಾಯಗೊಂಡಿದ್ದಾರೆ. ಇಬ್ಬರು ಸ್ಥಿತಿ ಗಂಭೀರವಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆ ಆಸ್ಪತ್ರೆ ಗೆ ರವಾನಿಸಲಾಗಿದೆ. ಉಳಿದವರು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

 

 

 

Ad
Ad
Nk Channel Final 21 09 2023