ಆಂಧ್ರಪ್ರದೇಶ: ಕಳೆದ ಎರಡು ದಿನಗಳಿಂದ ಆಂಧ್ರಪ್ರದೇಶ, ತೆಲಂಗಾಣದಲ್ಲಿ ವರುಣನ ಅಬ್ಬರ ಜೋರಾಗಿದ್ದು ಮಳೆಯಿಂದ ಇದುವರೆಗೂ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಅಲ್ಲದೆ ವಿವಿಧ ಭಾಗಗಳಿಂದ 17,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಅಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ, 140ಕ್ಕೂ ಹೆಚ್ಚು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಭಾರಿ ಮಳೆಯ ಪರಿಣಾಮ ಆಂದ್ರಪ್ರದೇಶದಲ್ಲಿ ಒಂಬತ್ತು ಮಂದಿ ಮೃತಪಟ್ಟರೆ, ತೆಲಂಗಾಣದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆಂಧ್ರದಲ್ಲಿ ಇನ್ನೂ ಮೂರು ಜನರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ ಎಂದು ಶಂಕಿಸಲಾಗಿದೆ ಇದರ ಜೊತೆಗೆ ತೆಲಂಗಾಣದಲ್ಲಿ ಒಬ್ಬರು ನಾಪತ್ತೆಯಾಗಿದ್ದಾರೆ ಇಂಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

