Bengaluru 23°C
Ad

ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ : ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾಗುವ ಲಡ್ಡುಗಳಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರಾಣಿಗಳ ಕೊಬ್ಬು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು  ಗಂಭೀರ ಆರೋಪ ಮಾಡಿದ್ದಾರೆ. ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಿಂದ ನೀಡಲಾಗುವ ಪ್ರಸಾದ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಅವರು ಹೇಳಿದರು.

ಆಂಧ್ರಪ್ರದೇಶ: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾಗುವ ಲಡ್ಡುಗಳಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರಾಣಿಗಳ ಕೊಬ್ಬು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು  ಗಂಭೀರ ಆರೋಪ ಮಾಡಿದ್ದಾರೆ. ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಿಂದ ನೀಡಲಾಗುವ ಪ್ರಸಾದ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಅವರು ಹೇಳಿದರು.

ಅಮರಾವತಿಯಲ್ಲಿ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಈ ಹಿಂದೆ ವೈಎಸ್ಆರ್ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿಯಲ್ಲಿ ತಯಾರಾಗುತ್ತಿದ್ದ ಲಡ್ಡುಗಳಿಗೆ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆ ಅಲ್ಲದೆ ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಿ ಲಡ್ಡುಗಳನ್ನು ತಯಾರು ಮಾಡಲಾಗಿತ್ತು, ಆದರೆ ನಮ್ಮ ಸರಕಾರ ಬಂಡ ಬಳಿಕ ಈಗ ಶುದ್ಧ ತುಪ್ಪವನ್ನು ಬಳಸಲಾಗುತ್ತಿದೆ ಮತ್ತು ದೇವಸ್ಥಾನದಲ್ಲಿ ಎಲ್ಲವನ್ನೂ ಸ್ವಚ್ಛಗೊಳಿಸಲಾಗಿದೆ, ಇದು ಸುಧಾರಿತ ಗುಣಮಟ್ಟಕ್ಕೆ ಕಾರಣವಾಗುತ್ತದೆ ಎಂದು ನಾಯ್ಡು ಹೇಳಿದರು.

 

Ad
Ad
Nk Channel Final 21 09 2023