ಚೆನ್ನೈ: ತಮಿಳುನಾಡಿದ ಪುದುಚೇರಿಯಲ್ಲಿ ಮತ್ತೊಂದು ಹ್ಯೂಮನ್‌ ಮೆಟಾನ್ಯೂಮೋವೈರಸ್‌  ಸೋಂಕು ದೃಢಪಟ್ಟಿದೆ. ಮಗುವಿನಲ್ಲಿ ಸೋಂಕು ದೃಢಪಟ್ಟಿದ್ದು, ನಗರದ ಜವಹರ್‌ಲಾಲ್‌ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರದಲ್ಲಿ (ಜಿಪ್‌ಮರ್)‌ ಮಗು ಚಿಕಿತ್ಸೆ ಪಡೆಯುತ್ತಿದೆ.

ಹೆಣ್ಣು ಮಗುವಿಗೆ ನೆಗಡಿ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನೆಲೆ ಇತ್ತೀಚೆಗೆ ಜಿಪ್‌ಮರ್‌ಗೆ ದಾಖಲಿಸಲಾಗಿತ್ತು. ಮಗುವನ್ನು ಪರೀಕ್ಷೆಗೆ ಒಳಪಡಿಸಿದಾಗ ಹೆಚ್‌ಎಂಪಿವಿ ಸೋಂಕು ಇರುವುದು ದೃಢಪಟ್ಟಿದೆ.

ಮಗು ಚೇತರಿಸಿಕೊಳ್ಳುತ್ತಿದ್ದು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪುದುಚೇರಿಯ ಆರೋಗ್ಯ ಇಲಾಖೆ ನಿರ್ದೇಶಕ ವಿ. ರವಿಚಂದ್ರನ್‌ ತಿಳಿಸಿದ್ದಾರೆ. ಚೀನಾದಲ್ಲಿ ಹೆಚ್‌ಎಂಪಿವಿ ಪ್ರಕರಣಗಳು ಏರಿಕೆಯಾಗುತ್ತಿದ್ದಂತೆ ಕರ್ನಾಟಕ, ತಮಿಳುನಾಡು, ಗುಜರಾತ್‌, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೆಚ್‌ಎಂಪಿವಿ ಪ್ರಕರಣಗಳು ದೃಢಪಟ್ಟಿದೆ.