ತಮಿಳುನಾಡು: ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ತಮಿಳುನಾಡು ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಎಸ್‌ಪಿ ರಾಜ್ಯ ಮುಖ್ಯಸ್ಥರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ತಿರುವೆಂಗಡಂ ಅವರನ್ನು ಚೆನ್ನೈನ ಮಾಧವರಂ ಬಳಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏನಿದು ಪ್ರಕರಣ?
ಬೈಕ್‌ನಲ್ಲಿ ಬಂದ ವ್ಯಕ್ತಿಗಳ ಗುಂಪು ಆರ್ಮ್‌ಸ್ಟ್ರಾಂಗ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿತು, ಮಾರಣಾಂತಿಕವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಜೀವ ಉಳಿಯಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಕನಿಷ್ಠ 11 ಶಂಕಿತರನ್ನು ಬಂಧಿಸಲಾಗಿದೆ.

