ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿದ ಮತ್ತೆ ಭಾರತೀಯ ಸೇನೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಬರೋಬ್ಬರಿ ಆರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕುಲ್ಗಾಮ್ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಆರು ಉಗ್ರರ ಹುಟ್ಟಡಗಿಸಲಾಗಿದೆ.
ಉಗ್ರರು ಕುಲ್ಗಾಮ್‌ನ ಚಿನ್ನಿಗಾಮ್ ಮತ್ತು ಮದರ್‌ಗಾಮ್ ಗ್ರಾಮಗಳಲ್ಲಿ ನಿರ್ಮಿಸಲಾಗಿದ್ದ ಅಡಗುತಾಣಗಳಲ್ಲಿ ಕಳೆದ ಒಂದು ತಿಂಗಳಿಂದ ಬೀಡು ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಉಗ್ರರನ್ನು ಹತ್ಯೆಗೈಯಲಾಗಿತ್ತು. ಚಿನ್ನಿಗಾಮ್‌ನಲ್ಲಿ Ak 47 ಬಂದೂರುಗಳು, ಸುಧಾರಿತ ಸ್ಫೋಟಕಗಳನ್ನು(IED) ವಶಕ್ಕೆ ಪಡೆಯಲಾಗಿದೆ. ಈ ಆರು ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ.

