Ad

ಜಮ್ಮು-ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ : 6 ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದಲ್ಲಿದ ಮತ್ತೆ ಭಾರತೀಯ ಸೇನೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಬರೋಬ್ಬರಿ ಆರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕುಲ್ಗಾಮ್‌ ಮತ್ತು ಶೋಪಿಯಾನ್‌ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಆರು ಉಗ್ರರ ಹುಟ್ಟಡಗಿಸಲಾಗಿದೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿದ ಮತ್ತೆ ಭಾರತೀಯ ಸೇನೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಬರೋಬ್ಬರಿ ಆರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕುಲ್ಗಾಮ್‌ ಮತ್ತು ಶೋಪಿಯಾನ್‌ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಆರು ಉಗ್ರರ ಹುಟ್ಟಡಗಿಸಲಾಗಿದೆ.

Ad
300x250 2

ಉಗ್ರರು ಕುಲ್ಗಾಮ್‌ನ ಚಿನ್ನಿಗಾಮ್‌ ಮತ್ತು ಮದರ್‌ಗಾಮ್‌ ಗ್ರಾಮಗಳಲ್ಲಿ ನಿರ್ಮಿಸಲಾಗಿದ್ದ ಅಡಗುತಾಣಗಳಲ್ಲಿ ಕಳೆದ ಒಂದು ತಿಂಗಳಿಂದ ಬೀಡು ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಉಗ್ರರನ್ನು ಹತ್ಯೆಗೈಯಲಾಗಿತ್ತು. ಚಿನ್ನಿಗಾಮ್‌ನಲ್ಲಿ Ak 47 ಬಂದೂರುಗಳು, ಸುಧಾರಿತ ಸ್ಫೋಟಕಗಳನ್ನು(IED) ವಶಕ್ಕೆ ಪಡೆಯಲಾಗಿದೆ. ಈ ಆರು ಉಗ್ರರು ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ.

 

Ad
Ad
Nk Channel Final 21 09 2023
Ad