ಗ್ಯಾಂಗ್ಟಾಕ್: ಸಿಕ್ಕಿಂನ ಪಾಕ್ಯೊಂಗ್ ಜಿಲ್ಲೆಯಲ್ಲಿ ಸೇನಾ ವಾಹನವು ಅಪಘಾತಕ್ಕೀಡಾದ ಪರಿಣಾಮ ನಾಲ್ವರು ಸೇನಾ ಸಿಬ್ಬಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಸೇನಾ ಸಿಬ್ಬಂದಿ ಕರೆದೊಯ್ಯುತ್ತಿದ್ದ ವಾಹನವು ರೆನಾಕ್-ರೋಂಗ್ಲಿ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಮಧ್ಯಪ್ರದೇಶದ ಸಿಪಾಯಿ ಪ್ರದೀಪ್ ಪಟೇಲ್, ಇಂಫಾಲ್ ನಿವಾಸಿ ಪೀಟರ್, ಹರಿಯಾಣ ನಿವಾಸಿ ನಾಯಕ್ ಗುರ್ಸೇವ್ ಸಿಂಗ್ ಮತ್ತು ತಮಿಳುನಾಡಿನ ಸುಬೇದಾರ್ ಕೆ ತಂಗಪಾಂಡಿ ಎಂದು ಗುರುತಿಸಲಾಗಿದೆ.

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಸೇನೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.