ಶ್ರೀನಗರ : ಸೇನಾ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಜಮ್ಮು ಕಾಶ್ಮಿರದಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 10 ಸೈನಿಕರು ಹುತಾತ್ಮರಾಗಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
ಬರೋಬ್ಬರಿ 17 ಸವಾರರು ಸಂಚರಿಸುತ್ತಿದ್ದ ಸೇನಾ ವಾಹನವೊಂದು ಬೃಹತ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, 10 ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಯೋಧರ ಸ್ಥಿತಿ ಗಂಭೀರವಾಗಿದೆ.
ಕೂಡಲೇ ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಭದೇರ್ವಾದ ಖಾನಿ ಟಾಪ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸೇನಾ ವಾಹನವೊಂದು ಸಿಲುಕಿತ್ತು. ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಅಪಘಾತದಲ್ಲಿ ಎಲ್ಲಾ ಯೋಧರಿಗೆ ತೀವ್ರ ಗಾಯವಾಗಿತ್ತು. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ 10 ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಸೈನಿಕರಿಗೆ ಗಂಭೀರ ಗಾಯಗಳಾಗಿವೆ. ಎಸ್‌ಕೆ ಪಯೆನ್ ಪ್ರದೇಶದ ಬಳಿ ಮಧ್ಯಾಹ್ನ 2.30 ರ ಸುಮಾರಿಗೆ ಸಂಭವಿಸಿದ ಈ ದುರಂತಕ್ಕೆ ರಸ್ತೆ ಹದಗೆಟ್ಟಿರುವುದು ಮತ್ತು ಕೆಟ್ಟ ಹವಾಮಾನ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಟ್ಟ ರಸ್ತೆ ಮತ್ತು ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ, ರಕ್ಷಣಾ ಕಾರ್ಯಾಚರಣೆ ಕಷ್ಟವಾಗಿತ್ತು. ಗಾಯಗೊಂಡ ಸೈನಿಕರಿಗೆ ತಕ್ಷಣವೇ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಚಿಕಿತ್ಸೆಗಾಗಿ ಉಧಂಪುರಕ್ಕೆ ಸೇನಾ ವಿಮಾನದ ಮೂಲಕ ಕರೆದೊಯ್ಯಲಾಯ್ತು.
ಕಂದಕಕ್ಕೆ ಬಿದ್ದ ಸೇನಾ ವಾಹನವು ಗುಂಡು ನಿರೋಧಕವಾಗಿತ್ತು. ಸೇನಾ ವಾಹನದಲ್ಲಿ 17 ಸೈನಿಕರಿದ್ದರು. ಎತ್ತರದ ಪೋಸ್ಟ್ಗೆ ಪ್ರಯಾಣಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನವು 200 ಅಡಿ ಆಳದ ಕಂದಕಕ್ಕೆ ಉರುಳಿತು. ಸೇನಾ ವಾಹನ ಕಂದಕಕ್ಕೆ ಉರುಳಿಬಿದ್ದಾಗ 7 ಯೋಧರು ಮೃತಪಟ್ಟಿದ್ದರು. 10 ಸೈನಿಕರು ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವಾಗ ಮತ್ತೆ ಮೂವರು ಯೋಧರು ಉಸಿರು ಚೆಲ್ಲಿದ್ದಾರೆ.

