Bengaluru 22°C
Ad

ಅರುಣಾಚಲ ಪ್ರದೇಶದಲ್ಲಿ ಭಾರಿ ಮುನ್ನಡೆಯತ್ತ ಬಿಜೆಪಿ !

Arunachl

ಅರುಣಾಚಲ ಪ್ರದೇಶ:ರುಣಾಚಲ ಪ್ರದೇಶದಲ್ಲಿ ಬಿಜೆಪಿ ಭಾರಿ ಮುನ್ನಡೆಯತ್ತ ಸಾಗಿದೆ. ಈಗಾಗಲೇ 10 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿರುವ ಬಿಜೆಪಿ, ಉಳಿದ 50 ಕ್ಷೇತ್ರಗಳ ಪೈಕಿ 34ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಉಳಿದಂತೆ ಎನ್‌ಪಿಇಪಿ 6ರಲ್ಲಿ ಹಾಗೂ ಇತರೆ ಪಕ್ಷಗಳು 8 ಕಡೆ ಮುನ್ನಡೆಯಲ್ಲಿವೆ.

Ad
300x250 2

ಸಿಕ್ಕಿಂನಲ್ಲಿಯೂ ಎಸ್‌ಕೆಎಂ ಭಾರಿ ಬಹುಮತ ಸಾಧಿಸುವ ಲಕ್ಷಣಗಳು ಕಂಡುಬಂದಿವೆ. ಇಲ್ಲಿನ 32 ವಿಧಾನಸಭಾ ಸ್ಥಾನಗಳ ಪೈಕಿ 31ರಲ್ಲಿ ಮುನ್ನಡೆ ಸಾಧಿಸಿದೆ. ಪ್ರಮುಖ ವಿರೋಧ ಪಕ್ಷ ಎಸ್‌ಡಿಎಫ್‌ ಒಂದು ಕಡೆಯಷ್ಟೇ ಮುನ್ನಡೆಯಲ್ಲಿದೆ.

ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 36 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಉಳಿದಂತೆ ಎನ್‌ಪಿಇಪಿ 9ರಲ್ಲಿ ಹಾಗೂ ಇತರೆ ಪಕ್ಷಗಳು 7 ಕಡೆ ಮುನ್ನಡೆಯಲ್ಲಿವೆ.

ಸಿಕ್ಕಿಂನಲ್ಲಿ ಎಸ್‌ಕೆಎಂ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎಸ್‌ಡಿಎಫ್‌ ಒಂದು ಕಡೆಯಷ್ಟೇ ಮುನ್ನಡೆಯಲ್ಲಿದೆ. ಯಾವುದೇ ಪಕ್ಷ ಬಹುಮತ ಸಾಬೀತು ಮಾಡಲು ಅರುಣಾಚಲ ಪ್ರದೇಶದಲ್ಲಿ 31 ಸ್ಥಾನಗಳನ್ನು ಹಾಗೂ ಸಿಕ್ಕಿಂನಲ್ಲಿ 17 ಕ್ಷೇತ್ರಗಳನ್ನು ಗೆಲ್ಲಬೇಕಿದೆ.

ಸಿಕ್ಕಿಂನಲ್ಲಿರುವ 32 ಸ್ಥಾನಗಳ ಪೈಕಿ 24 ಕಡೆ ಎಸ್‌ಕೆಎಂ ಆರಂಭಿಕ ಮುನ್ನಡೆ ಸಾಧಿಸಿದೆ. ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 24 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ನ್ಯಾಷನಲ್‌ ಪೀಪಲ್ಸ್‌ ಪಾರ್ಟಿ (ಎನ್‌ಪಿಇಪಿ) 4 ಕಡೆ ಹಾಗೂ ಇತರೆ ಅಭ್ಯರ್ಥಿಗಳು 6 ಕಡೆ ಮುನ್ನಡೆಯಲ್ಲಿದ್ದಾರೆ.

Ad
Ad
Nk Channel Final 21 09 2023
Ad