Ad

ಅರವಿಂದ್‌ ಕೇಜ್ರಿವಾಲ್‌ಗೆ ಕೊನೆಗೂ ಸಿಕ್ಕಿತು ಜಾಮೀನು

ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಕೊನೆಗೂ ಜಾಮೀನು ಸಿಕ್ಕಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಕೊನೆಗೂ ಜಾಮೀನು ಸಿಕ್ಕಿದೆ.

Ad
300x250 2

ಅರವಿಂದ್‌ ಕೇಜ್ರಿವಾಲ್‌ ಅವರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯವು, ಒಂದು ಲಕ್ಷ ರೂ. ಬಾಂಡ್‌ ಪಡೆದು, ಅವರಿಗೆ ಜಾಮೀನು ಮಂಜೂರು ಮಾಡಿದೆ.

ಶುಕ್ರವಾರ ಬಾಂಡ್‌ ಬೇಲ್‌ಗೆ ಅರವಿಂದ್‌ ಕೇಜ್ರಿವಾಲ್‌ ಅರ್ಜಿ ಹಾಕಬಹುದಾಗಿದ್ದು, ಶುಕ್ರವಾರವೇ (ಜೂನ್‌ 21) ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಬೇಲ್‌ ಬಾಂಡ್‌ಗಳನ್ನು ಸ್ವೀಕರಿಸಲು ಎರಡು ದಿನ ಟೈಮ್‌ ಬೇಕು ಎಂಬುದಾಗಿ ಇ.ಡಿ ಮನವಿ ಮಾಡಿತ್ತು. ಆದರೆ, ಇದಕ್ಕೆ ನ್ಯಾ. ನಿಯಾಯ್‌ ಬಿಂದು ಅವರು ನಕಾರ ವ್ಯಕ್ತಪಡಿಸಿದರು.

Ad
Ad
Nk Channel Final 21 09 2023
Ad