ನವದೆಹಲಿ: ದೆಹಲಿ ಅಬಕಾರಿ ಲೈಸೆನ್ಸ್ ಹಗರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಎಎಪಿ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಜಾರಿ ನಿರ್ದೇಶನಾಲಯದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತನಾಗಿರುವ ಅರವಿಂದ್ ಕೇಜ್ರಿವಾಲ್‌ಗೆ ಈಗ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ ಪ್ರತ್ಯೇಕ ಪ್ರಕರಣದಲ್ಲಿ ಸಿಬಿಐನಿಂದಲೂ ಅರವಿಂದ್ ಕೇಜ್ರಿವಾಲ್ ಅವರು ಬಂಧಿತರಾಗಿರುವ ಕಾರಣ ಈಗ ಸುಪ್ರೀಂಕೋರ್ಟ್ ಜಾಮೀನು ನೀಡಿದರೂ ಕೂಡ ಕೇಜ್ರಿವಾಲ್‌ಗೆ ಬಿಡುಗಡೆ ಭಾಗ್ಯ ಇಲ್ಲವಾಗಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಆ ಬಳಿಕ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 10ರಂದು 21 ದಿನಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ತಿಹಾರ್ ಜೈಲಿಗೆ ಬಂದು ಜೂನ್ 2ರಂದು ಶರಣಾಗಿದ್ದರು.

