Bengaluru 23°C
Ad

ನಾನು ಪ್ರಾಮಾಣಿಕ, ಸತ್ಯವಾದಿ ಎಂದ ಅರವಿಂದ್‌ ಕೇಜ್ರಿವಾಲ್‌

ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಕೊನೆಗೂ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಕೊನೆಗೂ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಆಪಾದಿತ ಮದ್ಯ ನೀತಿ ಹಗರಣದಲ್ಲಿ ಕಳೆದ ಆರು ತಿಂಗಳಿನಿಂದ ಅರವಿಂದ್ ಕೇಜ್ರಿವಾಲ್‌ ಜೈಲುಪಾಲಾಗಿದ್ದರು. ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಎರಡು ತಿಂಗಳ ಹಿಂದೆ, ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಮುಖ್ಯಮಂತ್ರಿಗೆ ಜಾಮೀನು ನೀಡಲಾಗಿತ್ತು.

ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದಲ್ಲಿ ಕೇಜ್ರಿವಾಲ್‌ ಜೈಲು ಸೇರಿದ್ದರು. ಸುಮಾರು 6 ತಿಂಗಳುಗಳ ಕಾಲ ಜೈಲಲ್ಲಿದ್ದರು. ಈಗ ಜೈಲಿನಿಂದ ಹೊರಬಂದಿದ್ದಾರೆ. ಆದಾಗ್ಯೂ, ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರ ಒಪ್ಪಿಗೆಯಿಲ್ಲದೆ ಅವರು ತಮ್ಮ ಕಚೇರಿ ಅಥವಾ ದೆಹಲಿ ಸಚಿವಾಲಯಕ್ಕೆ ಹೋಗುವಂತಿಲ್ಲ, ಫೈಲ್‌ಗಳಿಗೆ ಸಹಿ ಹಾಕುವಂತಿಲ್ಲ ಎಂದು ಕೋರ್ಟ್‌ ಷರತ್ತು ವಿಧಿಸಿದೆ.

ನನ್ನ ಜೀವನದಲ್ಲಿ ನಾನು ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದೇನೆ. ನಾನು ಜೀವನದಲ್ಲಿ ಕಷ್ಟಗಳನ್ನು ಎದುರಿಸಿದ್ದೇನೆ. ಆದರೆ ದೇವರು ಪ್ರತಿ ಬಾರಿಯೂ ನನಗೆ ಸಹಾಯ ಮಾಡುತ್ತಾನೆ. ಏಕೆಂದರೆ ನಾನು ಪ್ರಾಮಾಣಿಕ ಮತ್ತು ಸತ್ಯವಾದಿ ಎಂದು ಜೈಲಿನಿಂದ ಹೊರಬಂದ ಬಳಿಕ ಕೇಜ್ರಿವಾಲ್‌ ಮಾತನಾಡಿದರು. ದೇವರು ನನಗೆ ಸರಿಯಾದ ಮಾರ್ಗವನ್ನು ತೋರಿಸಿದ್ದಾನೆ. ನನಗೆ ಶಕ್ತಿಯನ್ನು ನೀಡಿದ್ದಾನೆ. ಭಾರತದ ಅಭಿವೃದ್ಧಿಯನ್ನು ತಡೆಯುವ ಮತ್ತು ದೇಶವನ್ನು ವಿಭಜಿಸುವ ಈ ಶಕ್ತಿಗಳ ವಿರುದ್ಧ ನಾವೆಲ್ಲರೂ ಹೋರಾಡುತ್ತೇವೆ ಎಂದು ತಿಳಿಸಿದರು.

Ad
Ad
Nk Channel Final 21 09 2023