Ad

ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್​

Bail (1)

ದೆಹಲಿ: ಜಾಮೀನಿಗೆ ತಡೆ ನೀಡಿದ್ದ ದೆಹಲಿ ಹೈಕೋರ್ಟ್​ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಮುಂದೂಡಿದೆ. ಜೂನ್ 26ರಂದು ಸುಪ್ರೀಂಕೋರ್ಟ್​ ಮತ್ತೊಮ್ಮೆ ವಿಚಾರಣೆ ನಡೆಸಲಿದೆ.

Ad
300x250 2

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರನ್ನು ಬಂಧಿಸಲಾಗಿದೆ. ಮಧ್ಯಂತರ ಜಾಮೀನಿನ ಮೇಲೆ ಒಮ್ಮೆ ಬಿಡುಗಡೆ ಮಾಡಲಾಗಿತ್ತು. ಈ ಹಿಂದೆ ದೆಹಲಿ ನ್ಯಾಯಾಲಯದಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿಗೆ ಜಾಮೀನು ನೀಡಲಾಗಿತ್ತು. ಆದರೆ ಅವರ ಜಾಮೀನನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತನ್ನ ಆದೇಶ ನೀಡುವವರೆಗೆ ಜಾಮೀನಿಗೆ ತಡೆ ನೀಡಿದೆ.

ಶುಕ್ರವಾರ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಲೋಪ್‌ಸೈಡ್ ಮತ್ತು ಏಕಪಕ್ಷೀಯ ಎಂದು ವಾದಿಸಿದ್ದರು.

Ad
Ad
Nk Channel Final 21 09 2023
Ad