Bengaluru 28°C
Ad

ಬಿಜೆಪಿ ಇರುವವರೆಗೆ ಮೀಸಲಾತಿ ರದ್ದು ಸಾಧ್ಯವಿಲ್ಲ: ಅಮಿತ್‌ ಶಾ

ಮೀಸಲಾತಿ ವಿಚಾರದ ಬಗ್ಗೆ ರಾಹುಲ್‌ ಗಾಂಧಿ ಅಮೆರಿಕಾದಲ್ಲಿ ಪ್ರಸ್ತಾಪ ಮಾಡಿದ್ದನ್ನು ಉಲ್ಲೇಖಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕುಟುಕಿದ್ದಾರೆ.

ನವದೆಹಲಿ: ಮೀಸಲಾತಿ ವಿಚಾರದ ಬಗ್ಗೆ ರಾಹುಲ್‌ ಗಾಂಧಿ ಅಮೆರಿಕಾದಲ್ಲಿ ಪ್ರಸ್ತಾಪ ಮಾಡಿದ್ದನ್ನು ಉಲ್ಲೇಖಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕುಟುಕಿದ್ದಾರೆ. ಈ ಸಂಬಂಧ ಅಮಿತ್‌ ಶಾ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ, ಬಿಜೆಪಿ ಇರುವವರೆಗೂ ಯಾರೊಬ್ಬರೂ ಮೀಸಲಾತಿಯನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಶಾ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ದೇಶವನ್ನು ವಿಭಜಿಸುವ ಷಡ್ಯಂತ್ರ ರೂಪಿಸುವ ಶಕ್ತಿಗಳೊಂದಿಗೆ ನಿಂತು ದೇಶ ವಿರೋಧಿ ಹೇಳಿಕೆ ನೀಡುವುದು ಅಭ್ಯಾಸವಾಗಿ ಹೋಗಿದೆ. ಕಾಶ್ಮೀರದಲ್ಲಿ ದೇಶ ವಿರೋಧಿ ನ್ಯಾಷನಲ್‌ ಕಾನ್ಫರೆನ್ಸ್‌ ಬೆಂಬಲಿಸಿರುವ ಕಾಂಗ್ರೆಸ್‌ ಈಗ ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿದೆ ಎಂದು ತಿಳಿಸಿದ್ದಾರೆ.

ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭದ್ರತೆಗೆ ಬೆದರಿಕೆ ಮತ್ತು ಭಾವನೆಗಳನ್ನು ಘಾಸಿಗೊಳಿಸುತ್ತಿದ್ದಾರೆ. ಅವರ ಹೇಳಿಕೆಯು ಪ್ರಾದೇಶಿಕತೆ, ಧರ್ಮ ಮತ್ತು ಭಾಷಿಕ ಭಿನ್ನಾಭಿಪ್ರಾಯದ ರೀತಿಯಲ್ಲಿ ಬಿರುಕುಗಳನ್ನು ಉಂಟುಮಾಡುವ ಕಾಂಗ್ರೆಸ್‌ನ ರಾಜಕೀಯವನ್ನು ಬಯಲು ಮಾಡುತ್ತಿದೆ ಎಂದಿದ್ದಾರೆ.

ದೇಶದಲ್ಲಿ ಮೀಸಲಾತಿ ರದ್ದುಪಡಿಸುವ ಬಗ್ಗೆ ಹೇಳಿಕೆ ನೀಡುವ ಮೂಲಕ ರಾಹುಲ್ ಗಾಂಧಿ ಮತ್ತೊಮ್ಮೆ ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ಮುಖವನ್ನು ಮುನ್ನೆಲೆಗೆ ತಂದಿದ್ದಾರೆ. ಅವರ ಮನಸ್ಸಿನಲ್ಲಿದ್ದ ಆಲೋಚನೆಗಳು ಅಂತಿಮವಾಗಿ ಪದಗಳಾಗಿ ಹೊರಹೊಮ್ಮಿದೆ ಅಷ್ಟೇ ಎಂದು ಹೇಳಿರುವ ಅಮಿತ್‌ ಶಾ ಅವರು, ಬಿಜೆಪಿ ಇರುವವರೆಗೂ ಯಾರೊಬ್ಬರೂ ಮೀಸಲಾತಿಯನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಹೇಳಲು ಬಯಸುತ್ತೇನೆ ಎಂದರು.

Ad
Ad
Nk Channel Final 21 09 2023