Bengaluru 22°C
Ad

ಜಮ್ಮು-ಕಾಶ್ಮೀರದ ಯುವ ಮತದಾರರಿಗೆ ಪ್ರಧಾನಿ ಮೋದಿ ವಿಶೇಷ ಕರೆ

Pm (5)

ಜಮ್ಮು-ಕಾಶ್ಮೀರದಲ್ಲಿ ಹತ್ತು ವರ್ಷಗಳ ನಂತರ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದೆ. 370ನೇ ವಿಧಿ ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ನಡೆದ ಚುನಾವಣೆ ಇದಾಗಿದೆ. ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷ ಮೈತ್ರಿಯಾಗಿ ಸ್ಫರ್ಧೆ ಮಾಡುತ್ತಿದ್ದು, ಪಿಡಿಪಿ ಹಾಗೂ ಬಿಜೆಪಿ ಪ್ರತ್ಯೇಕವಾಗಿ ಕಣದಲ್ಲಿದೆ.

ತೀವ್ರ ಕುತೂಹಲ ಮೂಡಿಸಿರುವ ಈ ಚುನಾವಣೆಯ ಮೊದಲ ಹಂತವಾಗಿ ಇಂದು(ಸೆ. 17) ಬುಧವಾರ 24 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 2014ರ ನಂತರ ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆಯಾಗಿದ್ದು, ಯಾವುದೇ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್‌ ಬಿಗಿಬಂದೋಬಸ್ತ್‌ ಮಾಡಲಾಗಿದೆ. ಇನ್ನು ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರಿಗೆ ಪ್ರಧಾನಿ ವಿಶೇಷ ಕರೆ ನೀಡಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಇಂದು ಮತದಾನ ನಡೆಯುವ ಕ್ಷೇತ್ರಗಳಲ್ಲಿರುವ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ. ಹಾಗೂ ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸಿ. ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸುವವರಿಗೆ ಕರೆ ನೀಡುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Ad
Ad
Nk Channel Final 21 09 2023