Bengaluru 28°C
Ad

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮಾರ್ಲೆನಾ ಆಯ್ಕೆ

ಅಬಕಾರಿ ನೀತಿ ಹಗರಣ ಮತ್ತು ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದ ನಂತರ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಇದೀಗ ಮಂಗಳವಾರ (ಸೆ.17) ಆಮ್‌ ಆದ್ಮಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಿ ಅತಿಶಿ ಮರ್ಲೆನಾ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವಂತೆ ಕೇಜ್ರಿವಾಲ್‌ ಪ್ರಸ್ತಾಪಿಸಿರುವುದಾಗಿ ವರದಿ ತಿಳಿಸಿದೆ.

ನವದೆಹಲಿ: ಅಬಕಾರಿ ನೀತಿ ಹಗರಣ ಮತ್ತು ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದ ನಂತರ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಇದೀಗ ಮಂಗಳವಾರ (ಸೆ.17) ಆಮ್‌ ಆದ್ಮಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಿ ಅತಿಶಿ ಮರ್ಲೆನಾ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವಂತೆ ಕೇಜ್ರಿವಾಲ್‌ ಪ್ರಸ್ತಾಪಿಸಿರುವುದಾಗಿ ವರದಿ ತಿಳಿಸಿದೆ.

ದೆಹಲಿಯ ಕಲ್ಕಾಜಿ ಕ್ಷೇತ್ರದ ಆಪ್‌ ಶಾಸಕಿ ಅತಿಶಿಯನ್ನು ದೆಹಲಿ ನೂತನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ನಿರ್ಧಾರ ಆಪ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ. ಆಪ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಿ, ಶಿಕ್ಷಣ ಸಚಿವೆ ಅತಿಶಿ ಹೆಸರನ್ನು ಅರವಿಂದ್ ಕೇಜ್ರಿವಾಲ್‌ ಪ್ರಸ್ತಾಪಿಸಿದ್ದು, ಇದಕ್ಕೆ ಶಾಸಕರು ಸಹಮತ ವ್ಯಕ್ತಪಡಿಸಿರುವುದಾಗಿ ವರದಿ ವಿವರಿಸಿದೆ.
Ad
Ad
Nk Channel Final 21 09 2023