ಭೋಪಾಲ್: ಜಮೀನಿನ ಗಲಾಟೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಜೀವಂತವಾಗಿ ಸಮಾಧಿ ಮಾಡಲು ಮುಂದಾಗಿರುವಂತ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಹಿನೌಟಾ ಗ್ರಾಮದಲ್ಲಿ ನಡೆದಿದೆ.

ಹಿನೌಟಾ ಗ್ರಾಮದ ನಿವಾಸಿಗಳಾದ ಮಮತಾ ಪಾಂಡೆ ಮತ್ತು ಆಶಾ ಪಾಂಡೆ ಎಂಬ ಇಬ್ಬರು ಮಹಿಳೆಯರನ್ನು ಜೀವಂತವಾಗಿ ಸಮಾಧಿ ಮಾಡಲು ದುಷ್ಕರ್ಮಿಗಳು ಮುಂದಾಗಿದ್ದಾರೆ. ಪರಿಣಾಮ ಇಬ್ಬರು ಪ್ರಜ್ಞೆ ಕಳೆದುಕೊಂಡಿದ್ದರು ನಂತರ ಅವರನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಸ್ತೆ ಕಾಮಗಾರಿ ಕೆಲಸ ನಡೆಯುತ್ತಿದ್ದು ಇದು ಮಹಿಳೆಯರ ಜಮೀನಿನಲ್ಲಿ ಹಾದು ಹೋಗುತ್ತದೆ. ಹೀಗಾಗಿ ಇದಕ್ಕೆ ಮಹಿಳೆಯರು ಮಣ್ಣು ಹಾಕದಂತೆ ಬೆಂಜ್​ ಲಾರಿಯನ್ನು ತಡೆದಿದ್ದಾರೆ. ನಂತರ ಅಲ್ಲಿದ್ದವರು ಅವರನ್ನು ತಡೆಯಲು ಪ್ರಯತ್ನಿಸಿದರು ಹಿಂಜರಿಯದೆ ಪ್ರತಿಭಟಿಸಿದ್ದಾರೆ.

ಮಹಿಳೆಯರ ಮೇಲೆ ಮಣ್ಣು ಸುರಿಯುವಂತೆ ಲಾರಿ ಡ್ರೈವರ್​ಗೆ ದುಷ್ಕರ್ಮಿಗಳು ಹೇಳಿದ್ದಾರೆ. ಅವರು ಹೇಳಿದಂತೆ ಲಾರಿಯಲ್ಲಿದ್ದ ಜಲ್ಲಿಕಲ್ಲು ಮಿಶ್ರಿತ ಮಣ್ಣನ್ನು ಮಹಿಳೆಯರ ಮೇಲೆ ಸುರಿದು ಜೀವಂತ ಸಮಾಧಿ ಮಾಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.