ನವದೆಹಲಿ: ನಕಲಿ ಎಂಟ್ರಿ ಪಾಸ್ ಬಳಸಿ ಸಂಸತ್‌ಗೆ ಪ್ರವೇಶಿಸಲು ಯತ್ನಿಸಿದ ಆರೋಪದಡಿಯಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಸಂಸತ್ ಸಂಕೀರ್ಣದಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಕಾರ್ಮಿಕರೊಬ್ಬರು ನಕಲಿ ಪಾಸ್ ತೋರಿಸಿ ಗೇಟ್ ಒಂದರಲ್ಲಿ ಪ್ರವೇಶಿಸಲು ಯತ್ನಿಸಿದ್ದರು ಎಂದು ಹೇಳಿದ್ದಾರೆ.
ಬಳಿಕ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಅಧಿಕಾರಿಗಳು, ಆತನನ್ನು ಬಂಧಿಸಿ ದೆಹಲಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಆತನನ್ನು ವಿಚಾರಣೆಗೆ ಒಳಪಡಿಸಲಾಯಿತು. ಈ ವೇಳೆ ಆತನ ಪಾಸ್ ಅವಧಿ ಮುಕ್ತಾಯವಾಗಿರುವ ವಿಚಾರ ತಿಳಿದು ಬಂದಿದೆ.

