ಬಾಂಗ್ಲಾದೇಶ : ಬಾಂಗ್ಲಾದೇಶದಲ್ಲಿ ಹಿಂಸಾಚಾರ ಇನ್ನೂ ಮುಂದುವರೆದಿದೆ. ಸರ್ಕಾರಿ ಹುದ್ದೆಗಳಲ್ಲಿ ಮೀಸಲು ಕಡಿತಕ್ಕೆ ಆಗ್ರಹಿಸಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಿಂದ ದೇಶದಲ್ಲಿ ಭಾರಿ ಹಿಂಸಾಚಾರಕ್ಕೂ ಕಾರಣವಾಗಿದ್ದರಿಂದ ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳ ಸಾಂಸ್ಕೃತಿಕ ಕಟ್ಟಡಗಳು ಹಾನಿಗೆ ಒಳಗಾಗಿವೆ.
ರಾಜಧಾನಿ ಢಾಕಾದಲ್ಲಿ ಪ್ರತಿಭಟನಾ ನಿರತರಾಗಿದ್ದ ಬೃಹತ್ ಗುಂಪು ಹಿಂದೂ ಧರ್ಮಕ್ಕೆ ಸೇರಿದ ನಾಲ್ಕು ದೇವಾಲಯಗಳಿಗೆ ಕೆಲವು ಹಾನಿ ಉಂಟು ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿ, ಹಿಂದೂ, ಬೌದ್ಧ, ಕ್ರಿಶ್ಚಿಯನ್ ಸಂಘಟನೆ ಮುಖಂಡ ಕಾಜೋಲ್ ದೇಬ್‌ನಾಥ್ ಹೇಳಿದ್ದಾರೆ.
ಪ್ರತಿಭಟನಾಕಾರರು ದೇಶದಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳ ಶ್ರದ್ಧಾ ಕೇಂದ್ರಗಳಾದ ಇಸ್ಕಾನ್, ಕಲಿ ದೇವಸ್ಥಾನಗಳನ್ನು ಗುರಿಯಾಗಿಸಿದ್ದಾರೆ. ಹಾಗೆಯೇ ಆಡಳಿತ ವ್ಯವಸ್ಥೆಯಲ್ಲಿರುವ ಹಿಂದೂ ಧರ್ಮದ ಇಬ್ಬರು ಕೌನ್ಸಿಲರ್‌ಗಳನ್ನು ಉದ್ರಿಕ್ತರು ಹತ್ಯೆಗೈದಿದ್ದಾರೆ ಎನ್ನಲಾಗಿದೆ.