ನವದೆಹಲಿ: ಒಡಿಶಾದ ಬಿಜೆಪಿಯ ಪ್ರಮುಖ ನಾಯಕ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ. ಹಂಗಾಮಿ ಸ್ಪೀಕರ್ ಹುದ್ದೆ ತಾತ್ಕಾಲಿಕವಾದದ್ದು. ಸಾಂಪ್ರದಾಯಿಕವಾಗಿ ಸಂಸತ್ತಿನ ಹಿರಿಯ ಸದಸ್ಯರಿಗೆ ಈ ಸ್ಥಾನವನ್ನು ನೀಡಲಾಗುತ್ತದೆ. ಅವರು ಸ್ಪೀಕರ್ ಆಯ್ಕೆಯಾಗುವವರೆಗೆ ಪ್ರಧಾನ ಮಂತ್ರಿ ಮಂಡಳಿಯ ಸಚಿವರು ಮತ್ತು ಇತರ ಸಂಸದರಿಗೆ ಪ್ರಮಾಣ ವಚನ ಬೋಧಿಸುತ್ತಾರೆ.

“ಸಂವಿಧಾನದ ಪರಿಚ್ಛೇದ 95 (1)ರ ಅಡಿಯಲ್ಲಿ ಸ್ಪೀಕರ್ ಹುದ್ದೆಗೆ ಲೋಕಸಭೆಯ ಸಂಸದರಾದ ಭರ್ತೃಹರಿ ಮಹತಾಬ್ ಅವರನ್ನು ಸ್ಪೀಕರ್ ಆಗಿ ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ನೂತನ ಸ್ಪೀಕರ್ ಆಯ್ಕೆಯ ಚುನಾವಣೆಯವರೆಗೆ ಹಂಗಾಮಿ ಸ್ಪೀಕರ್ ಅವರ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ” ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ