ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತದಲ್ಲಿ 121 ಜನರು ಸಾವನ್ನಪ್ಪಿದ್ದು, ಸ್ವಯಂ-ಘೋಷಿತ ದೇವಮಾನವ ಭೋಲೆ ಬಾಬಾ ಅವರು ಈ ಘಟನೆ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದೇವರು ನಮಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ. ದಯವಿಟ್ಟು ಸರ್ಕಾರ ಮತ್ತು ಅಧಿಕಾರಿಗಳ ಬಗ್ಗೆ ನಂಬಿಕೆ ಇಡಿ. ಹಾಗೂ ಈ ಅವ್ಯವಸ್ಥೆ ಸೃಷ್ಟಿಸಿದ ಯಾರನ್ನೂ ಸರ್ಕಾರ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ತನಿಖೆ ಮಾಡಲು ಹಾಗೂ ವ್ಯವಸ್ಥೆ ಬಗ್ಗೆ ಮೇಲ್ವಿಚಾರಣೆ ಮಾಡಲು ಒಂದು ಸಮಿತಿಯನ್ನು ರಚಿಸುವಂತೆ ಸರ್ಕಾರಕ್ಕೆ ನನ್ನ ವಕೀಲ ಎ.ಪಿ. ಸಿಂಗ್ ಮೂಲಕ ಮನವಿ ಮಾಡಿಕೊಂಡಿದ್ದೇನೆ ಎಂದು ಹೇಳಿದರು. ಇನ್ನು ಸಾವನ್ನಪ್ಪಿರುವ ಕುಟುಂಬದ ಜತೆಗೆ ನಿಲ್ಲಬೇಕಿದೆ. ಹಾಗೂ ಜೀವನದುದ್ದಕ್ಕೂ ಅವರಿಗೆ ಸಹಾಯ ಮಾಡಲು ನಾನು ಸಿದ್ಧ ಎಮದು ಹೇಳಿದ್ದಾರೆ.