Bengaluru 23°C
Ad

ಭುವನೇಶ್ವರ: ಬಿಜೆಡಿ ನಾಯಕ ನವೀನ್ ಪಟ್ನಾಯಕ್ ರಾಜೀನಾಮೆ

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ  ಸೋತ ಬಳಿಕ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ರಾಜೀನಾಮೆ ಸಲ್ಲಿಸಿದ್ದಾರೆ. ನವೀನ್ ಪಟ್ನಾಯಕ್ ಅವರು ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಘುಬರ್ ದಾಸ್  ಅವರನ್ನು ಭೇಟಿ ಮಾಡಿ

ಭುವನೇಶ್ವರ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ  ಸೋತ ಬಳಿಕ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ರಾಜೀನಾಮೆ ಸಲ್ಲಿಸಿದ್ದಾರೆ.

ನವೀನ್ ಪಟ್ನಾಯಕ್ ಅವರು ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಘುಬರ್ ದಾಸ್  ಅವರನ್ನು ಭೇಟಿ ಮಾಡಿತನ್ನ ರಾಜೀನಾಮೆ ಪತ್ರವನ್ನು ನೀಡಿದರು.

ನವೀನ್ ಪಟ್ನಾಯಕ್ ಅವರ ಬಿಜೆಡಿ 51 ಸ್ಥಾನಗಳನ್ನು ಗೆದ್ದು 24 ವರ್ಷಗಳ ನಂತರ ಅಧಿಕಾರವನ್ನು ಕಳೆದುಕೊಂಡಿತು. ಪ್ರಮುಖ ಪ್ರತಿಸ್ಪರ್ಧಿ ಬಿಜೆಪಿ 71 ಸ್ಥಾನಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದೆ.

ಒಡಿಶಾದಲ್ಲಿ 147 ವಿಧಾನಸಭಾ ಸ್ಥಾನಗಳಿದ್ದು, ಸರ್ಕಾರ ರಚನೆಗೆ ಬಹುಮತಕ್ಕೆ 74 ಸ್ಥಾನಗಳ ಅಗತ್ಯವಿದೆ. ಕಾಂಗ್ರೆಸ್ 14 ಸ್ಥಾನಗಳನ್ನು ಗೆದ್ದಿದೆ.

24 ವರ್ಷಗಳ ಬಳಿಕ ಅಧಿಕಾರ ಕಳೆದುಕೊಂಡು ಬಿಜೆಡಿ ನವೀನ್ ಪಟ್ನಾಯಕ್ ರಾಜೀನಾಮೆ ನೀಡಿದ್ದಾರೆ.

Ad
Ad
Nk Channel Final 21 09 2023
Ad