Bengaluru 24°C
Ad

ಕೋವಿಡ್ ಲಸಿಕೆ ತಯಾರಕ ಸಂಸ್ಥೆಯಿಂದ ಬಿಜೆಪಿ ₹52 ಕೋಟಿ ದೇಣಿಗೆ ಪಡೆದಿದೆ : ಪ್ರಿಯಾಂಕಾ ಗಾಂಧಿ

ಕೋವಿಡ್ ಲಸಿಕೆ ಪಡೆದ ಜನರು ಸಾಯುತ್ತಿದ್ದಾರೆ. ಮತ್ತೊಂದೆಡೆ ಬಿಜೆಪಿ ಕೋವಿಡ್ ಲಸಿಕೆ ತಯಾರಕ ಕಂಪನಿಯಿಂದ ₹52 ಕೋಟಿ ದೇಣಿಗೆಯನ್ನು ಪಡೆದುಕೊಂಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ  ಆರೋಪಿಸಿದ್ದಾರೆ.

ಕುಲ್ಲು: ಕೋವಿಡ್ ಲಸಿಕೆ ಪಡೆದ ಜನರು ಸಾಯುತ್ತಿದ್ದಾರೆ. ಮತ್ತೊಂದೆಡೆ ಬಿಜೆಪಿ ಕೋವಿಡ್ ಲಸಿಕೆ ತಯಾರಕ ಕಂಪನಿಯಿಂದ ₹52 ಕೋಟಿ ದೇಣಿಗೆಯನ್ನು ಪಡೆದುಕೊಂಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ  ಆರೋಪಿಸಿದ್ದಾರೆ.

ಕೋವಿಡ್ ಲಸಿಕೆ ಪಡೆದ ಕೆಲವು ಪ್ರಕರಣಗಳಲ್ಲಿ ಅಡ್ಡಪರಿಣಾಮ ಕಂಡುಬಂದಿತ್ತು. ಈ ಪ್ರಕರಣಗಳನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.

ಹಿಮಾಚಲ ಪ್ರದೇಶದ ಕುಲ್ಲು ಪ್ರದೇಶದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಲಸಿಕೆ ತಯಾರಕ ಸಂಸ್ಥೆಯಿಂದ ಬಿಜೆಪಿ ₹52 ಕೋಟಿ ದೇಣಿಗೆ ಪಡೆದಿದೆ ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಪ್ರವಾಸೋದ್ಯಮ ಕ್ಷೇತ್ರ ಸೇರಿದಂತೆ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಬಿಜೆಪಿ ಸರ್ಕಾರ ಹಾನಿ ಮಾಡುತ್ತಿದೆ ಎಂದು ಸಹ ಅವರು ಆರೋಪಿಸಿದ್ದಾರೆ.

 

Ad
Ad
Nk Channel Final 21 09 2023
Ad