Bengaluru 23°C
Ad

ಮಂಡಿ ಲೋಕಸಭಾ ಕ್ಷೇತ್ರ: ಬಿಜೆಪಿಯ ಕಂಗನಾ ರನೌತ್ ಗೆ ಮುನ್ನಡೆ

Kangana

ಹಿಮಾಚಲ ಪ್ರದೇಶ: ಬಾಲಿವುಡ್ ನ ಖ್ಯಾತ ನಟಿ ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಆರಂಭಿಕ ಮುನ್ನಡೆ ಸಿಕ್ಕಿದೆ. ಇದು ಅವರ ಚೊಚ್ಚಲ ಚುನಾವಣೆಯಾಗಿದ್ದು, ಅವರು ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಪುತ್ರ ಕಾಂಗ್ರೆಸ್ ನ ವಿಕ್ರಮಾದಿತ್ಯ ಸಿಂಗ್ ವಿರುದ್ಧ ರನೌತ್ ಸ್ಪರ್ಧಿಸುತ್ತಿದ್ದಾರೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಮಂಡಿಯಲ್ಲಿ 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಪೈಕಿ ಬಿಜೆಪಿಯ ಕಂಗನಾ ರನೌತ್ ಮತ್ತು ಕಾಂಗ್ರೆಸ್ ಪಕ್ಷದ ವಿಕ್ರಮಾದಿತ್ಯ ಸಿಂಗ್ ನಡುವೆ ನೇರ ಸ್ಪರ್ಧೆ ಕಂಡುಬಂದಿದೆ. ಬೆಳಗ್ಗೆ ೧೦.೪೫ ರ ಮತ ಎಣಿಕೆ ಲೆಕ್ಕಾಚಾರ ಪ್ರಕಾರ, ಕಂಗನಾ ರನೌತ್ ಅವರು 225654 (+ 31092) ಮತಗಳಿಸಿದ್ದಾರೆ. ವಿಕ್ರಮಾದಿತ್ಯ ಸಿಂಗ್ 194562 ( -31092) ಮತ ಗಳಿಸಿದ್ದಾರೆ.

ಕಂಗನಾ ರನೌತ್ ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಪ್ರಬಲ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು.

Ad
Ad
Nk Channel Final 21 09 2023
Ad