Bengaluru 29°C
Ad

ಛತ್ತೀಸ್‌ಗಢದ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ  ಸ್ಫೋಟ: ಇಬ್ಬರು ಸಾವು

ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 6 ಮಂದಿ ಗಾಯಗೊಂಡ ಘಟನೆ ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯ  ಬೆರ್ಲಾ ಡೆವಲಪ್‌ಮೆಂಟ್ ಬ್ಲಾಕ್‌ನ ಪಿರ್ದಾ ಗ್ರಾಮದ ಬಳಿ ಇರುವ ಘಟಕದಲ್ಲಿ ನಡೆದಿದೆ. 

ರಾಯ್‌ಪುರ: ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯ  ಬೆರ್ಲಾ ಡೆವಲಪ್‌ಮೆಂಟ್ ಬ್ಲಾಕ್‌ನ ಪಿರ್ದಾ ಗ್ರಾಮದ ಬಳಿ ಇರುವ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ  ಸ್ಫೋಟ ಸಂಭವಿಸಿದ ಘಟನೆ ನಡೆದಿದೆ.

ಈ ಸ್ಪೋಟದಲ್ಲಿ ಒಬ್ಬರು ಸಾವನ್ನಪ್ಪಿ, 6 ಮಂದಿ ಗಾಯಗೊಂಡಿದ್ದಾರೆ. ಹಲವಾರು ಜನರು ನಾಪತ್ತೆಯಾಗಿದ್ದಾರೆ ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆಯಿದೆ. ಈ ಸ್ಫೋಟದಲ್ಲಿ ಗಾಯಗೊಂಡ 6 ಜನರನ್ನು ಚಿಕಿತ್ಸೆಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ರಾಯ್ಪುರಕ್ಕೆ ಕರೆದೊಯ್ಯಲಾಯಿತು.

ಈ ಸ್ಫೋಟ ಸಂಭವಿಸಿದಾಗ ಕನಿಷ್ಠ 100 ಮಂದಿ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ವಿಷಯ ತಿಳಿದ ಕೂಡಲೇ ಎಚ್ಚೆತ್ತ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.

Ad
Ad
Nk Channel Final 21 09 2023
Ad