Bengaluru 26°C
Ad

ಥಾಣೆಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ: ದುರಂತದಲ್ಲಿ 4 ಮಂದಿ ಸಾವು

ಮುಂಬೈ ಸಮೀಪದ ಥಾಣೆಯ ಡೊಂಬಿವ್ಲಿಯಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಹಲವಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮುಂಬೈ: ಮುಂಬೈ ಸಮೀಪದ ಥಾಣೆಯ ಡೊಂಬಿವ್ಲಿಯಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಹಲವಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಈ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎಂಐಡಿಸಿ 2ನೇ ಹಂತದಲ್ಲಿರುವ ರಾಸಾಯನಿಕ ಕಾರ್ಖಾನೆಯೊಳಗಿನ ಬಾಯ್ಲರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ನಂದಿಸಲು ಸುಮಾರು 15 ಇಂಜಿನ್‌ಗಳನ್ನು ನಿಯೋಜಿಸಲಾಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಬೆಂಕಿ ನಂದಿಸಲು 4 ಗಂಟೆಗೂ ಹೆಚ್ಚು ಸಮಯ ಬೇಕಾಗಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಸ್ಫೋಟದ ರಭಸಕ್ಕೆ ಅಕ್ಕಪಕ್ಕದ ಮನೆಗಳ ಗಾಜುಗಳು ಒಡೆದು ಹೋಗಿವೆ. ಕಾರು ಶೋರೂಂ ಸೇರಿದಂತೆ ಇನ್ನೆರಡು ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ‘ಡೊಂಬಿವಿಲಿ ಎಂಐಡಿಸಿಯ ಅಮುದನ್ ಕೆಮಿಕಲ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಘಟನೆ ದುರಂತಮಯವಾಗಿದೆ. ಈ ಘಟನೆಯಲ್ಲಿ ಸಿಲುಕಿದ್ದ 8 ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚಿನ ಆಂಬ್ಯುಲೆನ್ಸ್‌ಗಳನ್ನು ಸಿದ್ಧಪಡಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ.

ಎನ್‌ಡಿಆರ್‌ಎಫ್, ಟಿಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad