ಮುಂಬೈ : ಪತಿಯ ಜತೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನ ವರ್ಲಿಯ ಕೋಳಿವಾಡ ಪ್ರದೇಶದಲ್ಲಿ ನಡೆದಿದೆ.

ಘಟನೆಯ ವೇಳೆ ಅವರ ಬೈಕ್ ಪಲ್ಟಿಯಾಗಿ ಪತಿ-ಪತ್ನಿ ಇಬ್ಬರೂ ಕಾರಿನ ಬಾನೆಟ್​ ಮೇಲೆ ಬಿದ್ದಿದ್ದರು. ತನ್ನನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಪತಿ ಬಾನೆಟ್​ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ, ಆದರೆ ಮಹಿಳೆಗೆ ಸಾಧ್ಯವಾಗಲಿಲ್ಲ.

ಗಾಯಗೊಂಡ ಮಹಿಳೆಯನ್ನು ಸ್ಥಳದಲ್ಲೇ ಬಿಟ್ಟು ಕಾರಿನ ಚಾಲಕ ಪರಾರಿಯಾಗಿದ್ದಾನೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟೊರೊಳಗೆ ಅವರು ಸಾವನ್ನಪ್ಪಿದ್ದರು. ಪತಿ ಚಿಕಿತ್ಸೆ ಪಡೆಯುತ್ತಿದ್ದು, ಹಿಟ್ ಅಂಡ್ ರನ್ ಪ್ರಕರಣದ ತನಿಖೆಯನ್ನು ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.