Bengaluru 23°C
Ad

ಮಧ್ಯಪ್ರದೇಶದಲ್ಲಿ ದೋಣಿ ಮುಳುಗಿ 8 ಮಂದಿ ನಾಪತ್ತೆ : ನಾಲ್ವರ ರಕ್ಷಣೆ

ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಸೀಪ್ ನದಿಯಲ್ಲಿ ದೋಣಿಯೊಂದು ಮುಳುಗಿ 8 ಜನರು ನಾಪತ್ತೆಯಾಗಿದ್ದಾರೆ.

ನವದೆಹಲಿ: ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಸೀಪ್ ನದಿಯಲ್ಲಿ ದೋಣಿಯೊಂದು ಮುಳುಗಿ 8 ಜನರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಸಂಜೆಯಿಂದಲೇ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಪತ್ತೆಯಾಗದ ಹಿನ್ನೆಲೆಯಲ್ಲಿ ಅವರು ಸಾವನ್ನಪ್ಪಿರುವ ಸಾಧ್ಯತೆ ಹೆಚ್ಚಾಗಿದೆ. ಆದರೆ, ಇನ್ನೂ ಮೃತದೇಹಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ವಿಪತ್ತು ತುರ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಇಆರ್‌ಎಫ್) ತಂಡದ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಂದು ಸಂಜೆ 4.45ರ ಸುಮಾರಿಗೆ ಶಿಯೋಪುರ್ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಮನ್ಪುರ್ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಬಲವಾದ ಗಾಳಿಯಿಂದಾಗಿ ದೋಣಿ ಮಗುಚಿ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad