ದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ದೆಹಲಿಯಿಂದ ದುಬೈಗೆ ಹೊರಟಿರುವ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆಳಗ್ಗೆ ಇ-ಮೇಲ್ ಬಂದಿದೆ.
ಮಾಹಿತಿ ಬಂದ ನಂತರ ವಿಮಾನ ನಿಲ್ದಾಣದಲ್ಲಿ ಎಚ್ಚರಿಕೆ ನೀಡಲಾಗಿದೆ. ಭದ್ರತಾ ಸಂಸ್ಥೆ ಮತ್ತು ಬಾಂಬ್ ನಿಷ್ಕ್ರಿಯ ದಳ ವಿಮಾನವನ್ನು ಶೋಧಿಸಿದೆ. ಶೋಧ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೇಲ್ ಕಳುಹಿಸಿದವರನ್ನು ಗುರುತಿಸುವಲ್ಲಿ ನಿರತರಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ವಿಮಾನಗಳಿಗೆ ಬಾಂಬ್ ಬೆದರಿಕೆ ಹೆಚ್ಚಾಗುತ್ತಿದೆ. ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನಕ್ಕೆ (AC43) ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

