ಹೊಸದಿಲ್ಲಿ: ಇತ್ತೀಚಿನ ದಿನಗಳಲ್ಲಿ ಶಾಲೆ, ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆ ಗಳು ಆಗಾಗ ಬರುತ್ತಲೇ ಇರುತ್ತವೆ. ಅತ್ತ ಆರೋಪಿಗಳೂ ಪೊಲೀಸರ ಕೈಗೆ ಸಿಗದೇ ಚಳ್ಳೆ ಹಣ್ಣು ತಿನ್ನಿಸುತ್ತಿರುತ್ತಾರೆ.ಇದೀಗ ದಿಲ್ಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆಯೊಡ್ಡಿದ್ದ ಬಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇದೀಗ ದಿಲ್ಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆಯೊಡ್ಡಿದ್ದ ಬಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 13 ವರ್ಷದ ಬಾಲಕನೋರ್ವ ದಿಲ್ಲಿ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಹುಸಿಬಾಂಬ್ ಕರೆ ಮಾಡಿದ್ದ ಎನ್ನಲಾಗಿದೆ.
ಡೆಪ್ಯೂಟಿ ಪೊಲೀಸ್ ಕಮಿಷನರ್ ಉಷಾ ರಂಗ್ನಾನಿ ಮಾಹಿತಿ ನೀಡಿದ್ದು, ದುಬೈನಿಂದ ಬಂದಿದ್ದ ವಿಮಾನದಲ್ಲಿ ಬಾಂಬ್ ಇಟ್ಟಿರೋದಾಗಿ ಬಾಲಕ ಕೆಲವು ದಿನಗಳ ಹಿಂದೆ ಇ-ಮೇಲ್ ಕಳುಹಿಸಿದ್ದ. ತನಿಖೆ ನಡೆಸಿದ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ತಮಾಶೆಗಾಗಿ ಮೇಲ್ ಕಳುಹಿಸಿದಾಗ ಹೇಳಿದ್ದಾನೆ. ಇಮೇಲ್ ಕಳುಹಿಸಿದ ಕೆಲವೇ ಗಂಟೆಗಳಲ್ಲಿ ಅದನ್ನು ಡಿಲೀಟ್ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.

