Bengaluru 25°C
Ad

ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ

ದೆಹಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ ಬಂದಿರುವುದಾಗಿ ಮೂಲ ತಿಳಿಸಿದೆ.ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ವಿಮಾನಯಾನ ಭದ್ರತೆ ಮತ್ತು ಬಾಂಬ್ ನಿಷ್ಕ್ರಿಯ ತಂಡವು ಸ್ಥಳದಲ್ಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ

ದೆಹಲಿ: ದೆಹಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ ಬಂದಿರುವುದಾಗಿ ಮೂಲ ತಿಳಿಸಿದೆ.ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ವಿಮಾನಯಾನ ಭದ್ರತೆ ಮತ್ತು ಬಾಂಬ್ ನಿಷ್ಕ್ರಿಯ ತಂಡವು ಸ್ಥಳದಲ್ಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಯಿತು. ದೆಹಲಿ ಅಗ್ನಿಶಾಮಕ ಸೇವೆಯ ಪ್ರಕಾರ, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಮತ್ತು ವಿಮಾನವನ್ನು ಪರಿಶೀಲಿಸಲಾಗುತ್ತಿದೆ. ಇಂದು ಮುಂಜಾನೆ 5.35 ಕ್ಕೆ ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಇತ್ತು. QRT ಸ್ಥಳಕ್ಕೆ ತಲುಪಿತು.

Ad
Ad
Nk Channel Final 21 09 2023
Ad