ನವದೆಹಲಿ: ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಭದ್ರತಾ ದೃಷ್ಟಿಯಿಂದ ಮಾರ್ಗ ಮಧ್ಯೆಯೇ ವಾಪಸ್‌ ತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಲಾಗಿದೆ.

ವಿಮಾನವು ಪ್ರಸ್ತುತ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ AI 119 ವಿಮಾನವು ಮುಂಬೈನಿಂದ ಸುಮಾರು 2 ಗಂಟೆಗೆ ಹೊರಟಿತ್ತು. ಬಾಂಬ್‌ ಬೆದರಿಕೆ ಬಳಿಕ ವಿಮಾನವನ್ನು ದೆಹಲಿಗೆ ತಿರುಗಿಸಲಾಯಿತು.