ಮುಂಬೈ: ಪ್ಯಾರಿಸ್ ನಿಂದ ಮುಂಬೈಗೆ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ ಬಂದಿದೆ.
ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಯುಕೆ 024 ವಿಮಾನವು ಏರ್ ಸಿಕ್‌ನೆಸ್ ಬ್ಯಾಗ್‌ನಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿತ್ತು. ವಿಮಾನಯಾನ ಸಂಸ್ಥೆಯು ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ವಿಮಾನವು ಮುಂಬೈ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10.19 ಕ್ಕೆ ಇಳಿಯಿತು ಎಂದು ಮೂಲಗಳು ತಿಳಿಸಿವೆ.
ಪ್ಯಾರಿಸ್-ಮುಂಬೈ ವಿಮಾನದಲ್ಲಿ 12 ಸಿಬ್ಬಂದಿ ಹಾಗೂ 294 ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ. ಈ ಬೆದರಿಕೆಯ ನಂತರ, ವಿಮಾನ ಬರುವ ಮೊದಲು ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು.

