Bengaluru 23°C
Ad

ಕಾಲೇಜಿನಲ್ಲಿ ಹಿಜಬ್‌ ನಿಷೇಧ ಪ್ರಶ್ನಿಸಿ ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿ ಬಾಂಬೆ ಹೈಕೋರ್ಟ್‌

ಕಾಲೇಜು ಆವರಣದಲ್ಲಿ ಹಿಜಬ್‌ ನಿಷೇಧವನ್ನು ಪ್ರಶ್ನಿಸಿ ಮುಂಬೈ ಕಾಲೇಜಿನ ಒಂಬತ್ತು ಮುಸ್ಲಿಂ ವಿದ್ಯಾರ್ಥಿಗಳು ಸಲ್ಲಿಸಿದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.

ಮುಂಬೈ: ಕಾಲೇಜು ಆವರಣದಲ್ಲಿ ಹಿಜಬ್‌ ನಿಷೇಧವನ್ನು ಪ್ರಶ್ನಿಸಿ ಮುಂಬೈ ಕಾಲೇಜಿನ ಒಂಬತ್ತು ಮುಸ್ಲಿಂ ವಿದ್ಯಾರ್ಥಿಗಳು ಸಲ್ಲಿಸಿದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.

ಚೆಂಬೂರ್ ಟ್ರಾಂಬೆ ಎಜುಕೇಶನ್ ಸೊಸೈಟಿಯ ಎನ್‌ಜಿ ಆಚಾರ್ಯ ಮತ್ತು ಚೆಂಬೂರಿನ ಡಿಕೆ ಮರಾಠೆ ಕಾಲೇಜು ತೆಗೆದುಕೊಂಡ ನಿರ್ಧಾರದಲ್ಲಿ ನಾವು ಮಧ್ಯ ಪ್ರವೇಶಿಸಲ್ಲ ಎಂದು ನ್ಯಾಯಮೂರ್ತಿ ಎ.ಎಸ್.ಚಂದೂರ್ಕರ್ ಮತ್ತು ನ್ಯಾಯಮೂರ್ತಿ ರಾಜೇಶ್ ಪಾಟೀಲ್ ಅವರನ್ನೊಳಗೊಂಡ ವಿಭಾಗೀಯ ಪೀಠವು ತಿಳಿಸಿದೆ.

ಅರ್ಜಿದಾರರ ಹಕ್ಕು ಎಂಬ ಕಾರಣಕ್ಕೆ ಭಾರತೀಯ ಸಂವಿಧಾನದ ಆರ್ಟಿಕಲ್ 19 (1) (ಎ) ಮತ್ತು ಆರ್ಟಿಕಲ್ 25 ರ ಅಡಿಯಲ್ಲಿ ವಸ್ತ್ರ ಸಂಹಿತೆ ಉಲ್ಲಂಘಿಸಲಾಗುವುದಿಲ್ಲ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಕಂಪ್ಯೂಟರ್ ಸೈನ್ಸ್‌ ವಿದ್ಯಾರ್ಥಿಗಳು ತಮ್ಮ ಅರ್ಜಿಯಲ್ಲಿ CTES ನಿರ್ವಹಣೆಯ ನಿರ್ಧಾರವನ್ನು ‘ನಿರಂಕುಶ, ಅಸಮಂಜಸ ಎಂದು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಅರ್ಜಿ ವಜಾ ಆಗಿರುವುದರಿಂದ ಈಗ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ.

ಕಾಲೇಜು ವಿಧಿಸಿರುವ ಹೊಸ ವಸ್ತ್ರಸಂಹಿತೆ ಖಾಸಗಿತನ, ಘನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಿದ್ಯಾರ್ಥಿಗಳು ತಮ್ಮ ವಕೀಲ ಅಲ್ತಾಫ್ ಖಾನ್ ಮೂಲಕ ವಾದಿಸಿದ್ದರು. ಹೈಕೋರ್ಟ್ ಆದೇಶದ ವಿರುದ್ಧ ಉನ್ನತ ನ್ಯಾಯಾಲಯದ ಮೊರೆ ಹೋಗುವ ಮೊದಲು ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಸಮಾಲೋಚಿಸುವುದಾಗಿ ಖಾನ್ ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad