Ad

15‌ ದಿನದಲ್ಲಿ 10 ಸೇತುವೆ ಕುಸಿತ : 11 ಎಂಜಿನಿಯರ್‌ ಅಮಾನತು

ಬಿಹಾರದಲ್ಲಿ ಕಳೆದ 15 ದಿನದಲ್ಲಿ 10 ಸೇತುವೆಗಳು ಕುಸಿದು ಬಿದ್ದಿರುವ ಘಟನೆ  ನಡೆದಿದ್ದು, ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆಯ 11 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಜಲಸಂಪನ್ಮೂಲ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪಾಟ್ನಾ: ಬಿಹಾರದಲ್ಲಿ ಕಳೆದ 15 ದಿನದಲ್ಲಿ 10 ಸೇತುವೆಗಳು ಕುಸಿದು ಬಿದ್ದಿರುವ ಘಟನೆ  ನಡೆದಿದ್ದು, ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆಯ 11 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಜಲಸಂಪನ್ಮೂಲ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Ad
300x250 2

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಬಿಹಾರ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಚೈತನ್ಯ ಪ್ರಸಾದ್, ರಾಜ್ಯ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ 11 ಎಂಜಿನಿಯರುಗಳನ್ನನ್ನು ಅಮಾನತುಗೊಳಿಸಲಾಗಿದೆ. ಸೇತುವೆ ನಿರ್ಮಾಣದ ಹೊಣೆ ಹೊತ್ತಿರುವ ಗುತ್ತಿಗೆದಾರರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

ಬುಧವಾರ ನಡೆದಿದ್ದ ಪರಿಶೀಲನಾ ಸಭೆಯ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್, ಎಲ್ಲಾ ಹಳೆಯ ಸೇತುವೆಗಳ ಸಮೀಕ್ಷೆ ನಡೆಸುವಂತೆ ಮತ್ತು ತಕ್ಷಣದ ದುರಸ್ತಿ ಅಗತ್ಯವಿರುವ ಸೇತುವೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad