Bengaluru 23°C
Ad

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ಭೂಷಣ್‌ ಪುತ್ರನಿಗೆ ಭರ್ಜರಿ ಜಯ

ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಎದುರುಸಿತ್ತಿರುವ ಜ್‌ಭೂಷಣ್‌ ಶರಣ್​ ಸಿಂಗ್‌ ಅವರ ಕಿರಿಯ ಪುತ್ರ ಕರಣ್‌ ಭೂಷಣ್‌ ಸಿಂಗ್‌ ಅವರು ಸಮಾಜವಾದಿ ಪಕ್ಷದ ಭಗತ್ ರಾಮ್ ವಿರುದ್ಧ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದಲ್ಲಿ 1.4 ಲಕ್ಷ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ನವದೆಹಲಿ: ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಎದುರುಸಿತ್ತಿರುವ ಜ್‌ಭೂಷಣ್‌ ಶರಣ್​ ಸಿಂಗ್‌ ಅವರ ಕಿರಿಯ ಪುತ್ರ ಕರಣ್‌ ಭೂಷಣ್‌ ಸಿಂಗ್‌ ಅವರು ಸಮಾಜವಾದಿ ಪಕ್ಷದ ಭಗತ್ ರಾಮ್ ವಿರುದ್ಧ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದಲ್ಲಿ 1.4 ಲಕ್ಷ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಕಾರಣದಿಂದ ನಾಲ್ಕನೇ ಬಾರಿ ಟಿಕೆಟ್‌ ಕೈತಪ್ಪಿತ್ತು. ಹೀಗಾಗಿ ಅವರ ಪುತ್ರನಿಗೆ ಬಿಜೆಪಿ ಮಣೆ ಹಾಕಿತ್ತು. ಇದೀಗ ತಂದೆಯಂತೆ ಮಗನೂ ಕೂಡ ಭರ್ಜರಿ ಅಂತರದ ಗೆಲುವು ಸಾಧಿಸಿ ಕೈಸರ್‌ಗಂಜ್​ನಲ್ಲಿ ಪ್ರಾಬಲ್ಯ ಮೆರೆದಿದ್ದಾರೆ.

Ad
Ad
Nk Channel Final 21 09 2023
Ad