ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಗಡಿ ಭದ್ರತಾ ಪಡೆ (ಬಿಎಸ್ಎಫ್) ಜವಾನರು ಸಾವನ್ನಪ್ಪಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ. ವತರ್ಹಾಲ್ನ ಬ್ರೆಲ್ ಪ್ರದೇಶದ ಬಳಿ 36 ಬಿಎಸ್ಎಫ್ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಆಳವಾದ ಕಮರಿಗೆ ಬಿದ್ದ ಪರಿಣಾಮ ಈ ಘಟನೆ ಶುಕ್ರವಾರ ಸಂಭವಿಸಿದೆ.

ಎರಡನೇ ಹಂತದ ವಿಧಾನಸಭಾ ಚುನಾವಣೆಯ ಭಾಗವಾಗಿ ಯೋಧರನ್ನು ಚುನಾವಣಾ ಕರ್ತವ್ಯಕ್ಕೆ ಸಾಗಿಸಲಾಗುತ್ತಿತ್ತು. ಸ್ಥಳೀಯ ನಿವಾಸಿಗಳ ಬೆಂಬಲದೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಪ್ರಾರಂಭಿಸಲಾಯಿತು ಮತ್ತು ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಯಿತು.

ಘಟನಾ ಸ್ಥಳದ ಭಯಾನಕ ಅಪಘಾತದ ದೃಶ್ಯಗಳು ನೋಡಬಹುದು, ಬಸ್ ಕಮರಿಗೆ ಬಿದ್ದ ಪರಿಣಾಮ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಾಯಗೊಂಡ ಯೋಧರನ್ನು  ರಕ್ಷಿಸಲು ಸ್ಥಳೀಯರು ಧಾವಿಸುತ್ತಿರುವುದನ್ನು ಕಾಣಬಹುದು.

— Duniyadari247 (@Duniyadari247) September 21, 2024