Bengaluru 23°C
Ad

ಪಾಕಿಸ್ತಾನದ ಡ್ರೋನ್ ನನ್ನು ಹೊಡೆದುರುಳಿಸಿದ ಬಿಎಸ್‌ಎಫ್!

ಪಂಜಾಬ್‌ನ ಫಿರೋಜ್‌ಪುರದಲ್ಲಿ ಹೆರಾಯಿನ್ ಮತ್ತು ಪಿಸ್ತೂಲ್ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಚಂಡೀಘಡ: ಪಂಜಾಬ್‌ನ ಫಿರೋಜ್‌ಪುರದಲ್ಲಿ ಹೆರಾಯಿನ್ ಮತ್ತು ಪಿಸ್ತೂಲ್ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಚೀನಾದಲ್ಲಿ ತಯಾರಾದ ಡಿಜೆಐ ಮಾವಿಕ್ 3 ಕ್ಲಾಸಿಕ್ ಡ್ರೋನ್ 500 ಗ್ರಾಂ ಹೆರಾಯಿನ್, ಪಿಸ್ತೂಲ್ ಹೊತ್ತೊಯ್ಯುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಭಾರತೀಯ ವಾಯುಪ್ರದೇಶವನ್ನು ಉಲ್ಲಂಘಿಸಿದ ಪಾಕಿಸ್ತಾನದ ಡ್ರೋನ್ ಅನ್ನು ಬಿಎಸ್‌ಎಫ್ ಪಂಜಾಬ್ ಪೊಲೀಸ್ ಪಡೆ ತಡೆದಿವೆ.

ಬಿಎಸ್‌ಎಫ್ ಸಿಬ್ಬಂದಿ ತಕ್ಷಣವೇ ಡ್ರೋನ್ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ತಾಂತ್ರಿಕ ಕ್ರಮಗಳನ್ನು ಬಳಸಿಕೊಂಡು ಅದನ್ನು ಕೆಳಗಿಳಿಸಿದರು’ ಎಂದು ಬಿಎಸ್‌ಎಫ್ ಪಂಜಾಬ್ ಫ್ರಾಂಟಿಯರ್ ಟ್ವೀಟ್ ಮಾಡಿದೆ.

 

Ad
Ad
Nk Channel Final 21 09 2023