ಲಖನೌ: ಉತ್ತರ ಪ್ರದೇಶದ ಲಖನೌದಲ್ಲಿ ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 8ಕ್ಕೆ ಎರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಈ ಮೊದಲು ಅವಶೇಷಗಳಡಿ ಸಿಲುಕಿದ್ದ 28 ಜನರನ್ನು ರಕ್ಷಣೆ ಮಾಡಲಾಗಿತ್ತು. ಇದೀಗ ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ನಡುವೆ ಘಟನೆ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸ್ಥಳದಲ್ಲಿ ಇನ್ನೂ ಐವರು ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿದ್ದು, ಕಟ್ಟಡದ ಬಳಿ ನಿಂತಿದ್ದ ಟ್ರಕ್‌ಗೂ ಹಾನಿಯಾಗಿದೆ. ಕಟ್ಟಡ ಕುಸಿದು ಬಿದ್ದಿದ್ದರಿಂದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿತ್ತು. ಸದ್ಯ ಪೊಲೀಸ್ ತಂಡ ಹಾಗೂ ಇತರೆ ರಕ್ಷಣಾ ಪಡೆಗಳು ಸ್ಥಳಕ್ಕೆ ಆಗಮಿಸಿದ್ದು ಕಟ್ಟಡದ ಅವಶೇಷಗಳನ್ನು ತೆಗೆಯುವಲ್ಲಿ ನಿರತರಾಗಿದ್ದಾರೆ.