ಲಕ್ನೋ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹುಡುಗಿಯ ಮೇಲೆ ಗೂಳಿಯೊಂದು ಇದ್ದಕ್ಕಿದ್ದಂತೆ ದಾಳಿ ಮಾಡಿದ ಆಘಾತಕಾರಿ ಘಟನೆ ಲಕ್ನೋದ ಚೌಪಟ್ಟಿ ಪ್ರದೇಶದಲ್ಲಿ ನಡೆದಿದೆ.

ಸ್ಥಳದಲ್ಲಿದ್ದವರಿಂದ ಹುಡುಗಿಯ ರಕ್ಷಣೆ ಮಾಡಲಾಗಿದ್ದು, ದೊಡ್ಡ ದುರಂತ ತಪ್ಪಿದೆ. ಇಡೀ ಘಟನೆ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.