ಆಂಧ್ರಪ್ರದೇಶ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ ನಡೆದಿದ್ದು ನಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದೆ ಪರಿಣಾಮ ಇಬ್ಬರು ಮಹಿಳೆಯರು ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಘಟನೆ ಆಂಧ್ರ ಪ್ರದೇಶದ ಕುರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.
ಖಾಸಗಿ ಬಸ್ ಅಪಘಾತಕ್ಕೆ ಒಳಗಾಗಿದ್ದು, ಹೈದರಾಬಾದ್ನಿಂದ ಅದೋನಿಗೆ ಬಸ್ ಪ್ರಯಾಣ ಮಾಡುತ್ತಿತ್ತು. ನಿಯಂತ್ರಣ ಕಳೆದುಕೊಂಡ ಬಸ್ ಕುರ್ನೂಲ್ ಜಿಲ್ಲೆಯ ಕೊಡುಮುರ್ ಎಂಬಲ್ಲಿ ಪಲ್ಟಿಯಾಗಿದೆ.
ಅನಾಹುತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಗಾಯಗೊಂಡಿರುವ 20ಕ್ಕೂ ಹೆಚ್ಚು ಮಂದಿಯನ್ನು, ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರ್ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
Ad