ಉತ್ತರಪ್ರದೇಶ: ಕಾನ್ಪುರದಲ್ಲಿ ತಂಬಾಕು ಉದ್ಯಮಿ ಕೆ.ಕೆ.ಮಿಶ್ರಾ ಪುತ್ರ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲಂಬೋರ್ಗಿನಿ ಕಾರ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಜೊತೆಗೆ ಬೈಕ್, ಕಾರ್ ಗಳಿಗೂ ಡಿಕ್ಕಿ ಹೊಡೆದಿದೆ. 6 ಮಂದಿ ಗಾಯಗೊಂಡಿದ್ದಾರೆ.

ಲ್ಯಾಂಬೋರ್ಗಿನಿ ಕಾರು ಅಪಘಾತದ ಸಿಸಿಟಿವಿ ದೃಶ್ಯ ಸೆರೆಯಾಗಿದ್ದು, ಕಾನ್ಪುರ ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರ ಪ್ರಕಾರ, ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಎಫ್‌ಐಆರ್ ದಾಖಲಿಸಲಾಗಿದೆ.