ಮಹಾರಾಷ್ಟ್ರ: ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಬಳಿ ನಡೆದಿದೆ.
ಮಧ್ಯರಾತ್ರಿ 12;30 ವೇಳೆಗೆ ಆಲ್ಟೋ ಕಾರು ಚಿಂಚಣಿ ಪ್ರದೇಶದಲ್ಲಿರುವ ಟಕಾರಿ ನಾಲೆಗೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಸಿವಿಲ್ ಇಂಜಿನಿಯರ್ ಜಗನ್ನಾಥ್ ಪಾಟೀಲ್ (60) ಪತ್ನಿ ಸುಜಾತ ಪಾಟೀಲ್ (55) ಪುತ್ರಿ ಪ್ರಿಯಾಂಕಾ ಖರಾಡೆ (30), ಮೊಮ್ಮಗಳು ಧ್ರುವ (3), ರಾಜೀವಿ(2) ಮತ್ತು ಕಾರ್ತಿಕಿ (1) ಸಾವನ್ನಪ್ಪಿದ್ದಾರೆ. ಮತ್ತೋರ್ವ ಪುತ್ರಿ ಸ್ವಪ್ನಲಿ(30) ಗಾಯಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

