Bengaluru 27°C
Ad

ನೀಟ್ ಅಕ್ರಮಗಳ ಸಮಗ್ರ ತನಿಖೆ ಸಿಬಿಐಗೆ ನೀಡಲು ಕೇಂದ್ರದ ನಿರ್ಧಾರ

Cbi

ವದೆಹಲಿ: ನೀಟ್ ಅಕ್ರಮಗಳ ಸಮಗ್ರ ತನಿಖೆಗಾಗಿ ಪ್ರಕರಣ ವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲಾಗುವುದು ಎಂದು ಕೇಂದ್ರ ಸರ್ಕಾರವು ಶನಿವಾರ ರಾತ್ರಿ ಘೋಷಿಸಿದೆ. ‘ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಪ್ರಕರಣವನ್ನು ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಯಿತು’ ಎಂದು ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

Ad
300x250 2

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ನೀಟ್‌-ಯುಜಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆಗೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಸೂಚಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸದಾಗಿ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು.

ಪರೀಕ್ಷೆಗೆ ಹಾಜರಾಗಿದ್ದ 10 ಮಂದಿ ವಿದ್ಯಾರ್ಥಿಗಳು ಈ ಅರ್ಜಿ ಸಲ್ಲಿಸಿದ್ದರು. ‍ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಬಿಹಾರ ಪೊಲೀಸರಿಗೆ, ತನಿಖೆಯನ್ನು ಬೇಗನೆ ನಡೆಸಿ ವರದಿಯೊಂದನ್ನು ಸಲ್ಲಿಸಲು ಸೂಚಿಸಬೇಕು ಎಂದು ಕೂಡ ಅರ್ಜಿಯಲ್ಲಿ ಕೋರಲಾಗಿದೆ.

ನೀಟ್-ಯುಜಿ 2024 ಪರೀಕ್ಷೆಯನ್ನು ರದ್ದುಪಡಿಸಬೇಕು, ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಆದೇಶಿಸಬೇಕು ಎಂಬ ಕೋರಿಕೆ ಇರುವ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಈಗಾಗಲೇ ಸಲ್ಲಿಕೆಯಾಗಿವೆ. ಅವುಗಳಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ (ಎನ್‌ಟಿಎ) ಕೋರ್ಟ್‌ ನೋಟಿಸ್ ಜಾರಿಗೊಳಿಸಿದೆ.

‘ನೀಟ್‌-ಯುಜಿ’ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಬಿಹಾರ ಪೊಲೀಸ್‌ ಆರ್ಥಿಕ ಅಪರಾಧಗಳ ಘಟಕವು (ಇಒಯು) ಪಟ್ನಾದ ಫ್ಲಾಟ್‌ನಿಂದ ವಶಪಡಿಸಿಕೊಂಡಿರುವ ಕೆಲ ದಾಖಲೆಗಳನ್ನು, ಎನ್‌ಟಿಎಯಿಂದ ಸ್ವೀಕರಿಸಿರುವ ಪ್ರಶ್ನೆ ಪತ್ರಿಕೆಯ ಜತೆಗೆ ತಾಳೆ ನೋಡಲು ಯೋಜಿಸಿದೆ.

Ad
Ad
Nk Channel Final 21 09 2023
Ad