ನವದೆಹಲಿ : ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಚಂಪೈ ಸೊರೇನ್ ಆಗಸ್ಟ್ 30 ರಂದು ರಾಂಚಿಯಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮತ್ತು ನಮ್ಮ ದೇಶದ ಪ್ರತಿಷ್ಠಿತ ಆದಿವಾಸಿ ನಾಯಕ, ಚಂಪೈ ಸೊರೆನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸ್ವಲ್ಪ ಸಮಯದ ಹಿಂದೆ ಭೇಟಿಯಾದರು. ಅವರು ಆಗಸ್ಟ್ 30 ರಂದು ರಾಂಚಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರಲಿದ್ದಾರೆ ಎಂದು ಅಸ್ಸಾಂ ಸಿಎಂ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜೆಎಂಎಂ ನಾಯಕತ್ವದ ವಿರುದ್ಧ ಅಸಮಾಧಾನ ಹೊರಹಾಕಿದ್ದ ಚಂಪೈ, ‘ಮುಂದಿನ ರಾಜಕೀಯ ನಡೆಯ ಬಗ್ಗೆ ಶೀಘ್ರದಲ್ಲೇ ನಿರ್ಧರಿಸುತ್ತೇನೆ’ ಎಂದಿದ್ದರು. ಈ ವೇಳೆ ಚಂಪೈ ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಇದಕ್ಕೆ ಪೂರಕವಂತೆ ನಿನ್ನೆ ಅಂದರೆ ಸೋಮವಾರ ಇವೆಲ್ಲದಕ್ಕೂ ಚಂಪೈ ತೆರೆ ಎಳೆದಿದ್ದು, ಆಗಸ್ಟ್ 30 ರಂದು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ ಎಂದು ವರದಿಯಾಗಿದೆ.